ಜೂನ್ 18 ರಂದು ಲೀಡ್ ಬ್ಯಾಂಕ್ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14. ಲೀಡ್ ಬ್ಯಾಂಕ್ ಯೋಜನೆಗಳ ಜಿಲ್ಲಾ ಸಲಹಾ ಸಮಿತಿ ಸಭೆಯು ಜೂನ್ 18ರಂದು ಬೆಳಿಗ್ಗೆ 10:30 ಗಂಟೆಗೆ ಮತ್ತು ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸಭೆ 11:30 ಗಂಟೆಗೆ ದಕ್ಷಿಣ ಕನ್ನಡ ಲೋಕಸಭೆ ಸದಸ್ಯ ಕ್ಯಾ.ಬ್ರಿಜೇಶ್ ಚೌಟ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್.ಕೆ ಸಭೆಯಲ್ಲಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Scroll to Top