ಐಎಎಸ್ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14. 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಐಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಸ್ಟೆಲ್ ಸಹಿತ ಪರೀಕ್ಷಾ ಪೂರ್ವ ತರಬೇತಿ ಅಥವಾ ಶಿಷ್ಯವೇತನದೊಂದಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ 3 ತಿಂಗಳ ಯು.ಪಿ.ಎಸ್.ಸಿ (UPSಅ) ಮುಖ್ಯ ಪರೀಕ್ಷಾ ತರಬೇತಿ ನೀಡಲಾಗುತ್ತಿದ್ದು, ತರಬೇತಿಗೆ ಅರ್ಹ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್  21 ಕೊನೆಯ ದಿನ. ತರಬೇತಿ ಬೆಂಗಳೂರಿನಲ್ಲಿ ನಡೆಯಲಿದೆ. ಅರ್ಜಿದಾರರು ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್‍ಸೈಟ್ https://dom.karnataka.gov.in ನಲ್ಲಿ ಲಭ್ಯವಿರುವ ಅರ್ಜಿ ನಮೂನೆಯನ್ನು ಪಡೆದು ಮಾರ್ಗಸೂಚಿಗಳನ್ವಯ ಅರ್ಜಿ ಸಲ್ಲಿಸಲು ಸೂಚಿಸಿಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಜಿಲ್ಲಾ ಕಚೇರಿ, ಹಾಗೂ ಹತ್ತಿರದ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಹಾಗೂ ಅಲ್ಪಸಂಖ್ಯಾತರ ಸಹಾಯವಾಣಿ ಸಂಖೈ;8277799990ಗೆ ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top