(ನ್ಯೂಸ್ ಕಡಬ) newskadaba.com ಜೂ. 14. ತಾಯಿ ಜೀವಂತವಿರುವಾಗಲೇ ಪಾಪಿ ಪುತ್ರನೋರ್ವ ಆಸ್ತಿಗಾಗಿ ಸುಳ್ಳು ಅರ್ಜಿ ನೀಡಿ ತಾಯಿಯ ಡೆತ್ ಸರ್ಟಿಫಿಕೇಟ್ ಪಡೆದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ನಡೆದಿದೆ. ಆರೋಪಿಯನ್ನು ಬಂಧಿಸಲಾಗಿದೆ. ಜೊತೆಗೆ ಮರಣ ಪ್ರಮಾಣಪತ್ರ ನೀಡಿದ ಪುರಸಭೆ ಅಧಿಕಾರಿಗೂ ನೋಟಿಸ್ ನೀಡಲಾಗಿದೆ.
ಬಂಧಿತ ಆರೋಪಿಯನ್ನು ಶೌಕತ್ ಅಲಿ ಎಂದು ಗುರುತಿಸಲಾಗಿದೆ. ಶೌಕತ್ ಅಲಿ ತಂದೆ ಅವರು 2001 ರಲ್ಲಿ ಮೃತಪಟ್ಟಿದ್ದು, ಪುತ್ರ ಹಾಗೂ ಆತನ ತಾಯಿ ಹೂರಾಂಬಿ ಜಂಗ್ಲಿ ಸಾಬ್ ಎಂಬವರ ಹೆಸರಿನಲ್ಲಿ 2 ಎಕರೆ ಜಮೀನು ಜಂಟಿ ಖಾತೆಯಲ್ಲಿತ್ತು. ಈತ ಆಸ್ತಿ ಕಬಳಿಸುವ ಉದ್ದೇಶದಿಂದ ಶೌಕತ್ ನಕಲಿ ಮರಣ ಪ್ರಮಾಣ ಪತ್ರವನ್ನು ಪಡೆದಿದ್ದು, ಈ ವಿಷಯ ತಿಳಿದ ಆತನ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಶೌಕತ್ ಅಲಿಯನ್ನು ಪೊಲೀಸರು ಬಂಧನ ಮಾಡಿದ್ದು, ತನಿಖೆಗೊಳಪಡಿಸಿದ್ದಾರೆ.