ಆಗುಂಬೆ ಘಾಟಿಯಲ್ಲಿ ಘನ ವಾಹನ ಸಂಚಾರ ನಿಷೇಧ

(ನ್ಯೂಸ್ ಕಡಬ) newskadaba.com ಜೂ. 14. ಭಾರೀ ಮಳೆಯಿಂದಾಗಿ ಮತ್ತು ಭಾರೀ ವಾಹನಗಳ ಓಡಾಟದಿಂದಾಗಿ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂ ಕುಸಿತ ಆಗುವ ಸಂಭವ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜೂನ್ 15 ರಿಂದ 30ರವರೆಗೆ ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ- ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿಉಡುಪಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಅವರು ಈ ಬಗ್ಗೆ ಆದೇಶ ಹೊರಡಿಸಿದ್ದು, ಬದಲಿ ಮಾರ್ಗದಲ್ಲಿ ಸಂಚರಿಸಲು ಸೂಚನೆ ನೀಡಿದ್ದಾರೆ.

ಉಡುಪಿ-ತೀರ್ಥಹಳ್ಳಿಗೆ ಸಂಚರಿಸುವ ಭಾರೀ ವಾಹನಗಳು ಉಡುಪಿ-ಕುಂದಾಪುರ ಸಿದ್ಧಾಪುರ ಮಾಸ್ತಿಕಟ್ಟೆ-ತೀರ್ಥಹಳ್ಳಿಗೆ ತೆರಳುವಂತೆ ಸೂಚಿಸಲಾಗಿದೆ. ಉಡುಪಿ-ತೀರ್ಥಹಳ್ಳಿಗೆ ಉಡುಪಿ-ಕಾರ್ಕಳ-ಮಾಳ ಘಾಟಿ-ಶೃಂಗೇರಿ-ತೀರ್ಥಹಳ್ಳಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ತಿಳಿಸಲಾಗಿದೆ.

Scroll to Top