ಮರ್ಧಾಳ: ನೂತನವಾಗಿ ಆರಂಭಗೊಳ್ಳಲಿರುವ ಶರೀಅತ್ ಮಹಿಳಾ ಕಾಲೇಜಿಗೆ ದಾಖಲಾತಿ ಆರಂಭ ► ವಾಣಿಜ್ಯ ವಿಭಾಗದ ಎಲ್ಲಾ ವಿಷಯಗಳಿಗೆ ಉಪನ್ಯಾಸಕರು ಬೇಕಾಗಿದ್ದಾರೆ

(ನ್ಯೂಸ್ ಕಡಬ) newskadaba.com ಕಡಬ, ಎ.04. ಮರ್ಧಾಳ ತಕ್ವೀಯತ್ತುಲ್ ಇಸ್ಲಾಂ ಎಜುಕೇಶನಲ್ ಟ್ರಸ್ಟ್ ವತಿಯಿಂದ ನೂತನವಾಗಿ ಆರಂಭಗೊಳ್ಳಲಿರುವ ಮಹಿಳಾ ಶರೀಅತ್ ಕಾಲೇಜಿನ ಪ್ರಥಮ ಹಾಗೂ ದ್ವಿತೀಯ ವರ್ಷದ ಪದವಿ ಪೂರ್ವ ವಾಣಿಜ್ಯ ವಿಭಾಗಕ್ಕೆ ಮಹಿಳಾ ಉಪನ್ಯಾಸಕರಿಂದ ಅರ್ಜಿ ಆಹ್ವಾನಿಸಲಾಗಿದೆ‌.

ವಾಣಿಜ್ಯ ವಿಭಾಗದ ಎಲ್ಲಾ ವಿಷಯಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅನುಭವಿ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ನೂತನವಾಗಿ ಆರಂಭಗೊಳ್ಳಲಿರುವ ಪ್ರಥಮ ಹಾಗೂ ದ್ವಿತೀಯ ತರಗತಿಗಳಿಗೆ ದಾಖಲಾತಿಯು ಆರಂಭಗೊಂಡಿದ್ದು, ಹೆಚ್ಚಿನ ಮಾಹಿತಿಗಾಗಿ 9620333155, 9611229255, 9663035906 ಸಂಖ್ಯೆಗಳನ್ನು ಸಂಪರ್ಕಿಸುವಂತೆ ಕೋರಲಾಗಿದೆ.

Also Read  ಸ್ವಸಹಾಯ ಸಂಘಗಳಿಗೆ ಡಿಜಿಟಲ್ ಪೇಮೆಂಡ್ ತರಬೇತಿ

error: Content is protected !!
Scroll to Top