ರಾಜ್ಯ ಆಡಳಿತಕ್ಕೆ ಮೇಜರ್ ಸರ್ಜರಿ – ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.17. ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿರುವ ರಾಜ್ಯ ಸರ್ಕಾರವು ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಗಿಲನ್ ಅವರನ್ನು ಇನ್ಸ್‌ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಆಂಡ್ ಸ್ಟಾಂಪ್ಸ್ ಆಯುಕ್ತರಾಗಿ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತರಾಗಿದ್ದ ದರ್ಶನ್ ಎಚ್.ವಿ. ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.

Scroll to Top