ರೈಲು ಢಿಕ್ಕಿ ಹೊಡೆದ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಜೂ. 16. ರೈಲು ಬಡಿದು ಮೃತಪಟ್ಟ ಸ್ಥಿತಿಯಲ್ಲಿ ಯುವತಿಯೋರ್ವಳ ಮೃತದೇಹ ಪತ್ತೆಯಾದ ಘಟನೆ ಕಾಸರಗೋಡಿನ ಪಳ್ಳಿಕೆರೆಯಲ್ಲಿ ನಡೆದಿದೆ.

ಮೃತಪಟ್ಟವರನ್ನು ಚೆರ್ವತ್ತೂರು ತುರುತ್ತಿ ಅಲಿಪ್ಪುರದ ಕೀರ್ತನಾ ಎಂದು ಗುರುತಿಸಲಾಗಿದೆ. ಭಾನುವಾರದಂದು ರೈಲ್ವೆ ಹಳಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಬಳಿಕ ಸಂಬಂಧಿಕರು ಅಗಮಿಸಿ ಮೃತ ದೇಹದ ಗುರುತು ಪತ್ತೆಹಚ್ಚಿದ್ದಾರೆ. ಕೀರ್ತನಾ ತಾತ್ಕಾಲಿಕ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಈ ಕುರಿತು ನೀಲೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!
Scroll to Top