ಇನ್ಮುಂದೆ ಕಾಲ್ತುಳಿತ ನಡೆದರೆ 3 ವರ್ಷ ಜೈಲು ಶಿಕ್ಷೆ- ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಜೂ. 16. ಐಪಿಎಲ್ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟ ಘಟನೆಯಿಂದ ಎಚ್ಚೆತ್ತ ರಾಜ್ಯ ಸರ್ಕಾರ ಇನ್ನು ಮುಂದೆ ಯಾವುದೇ ಸಭೆ ಸಮಾರಂಭ ಅಥವಾ ಲಕ್ಷಾಂತರ ಜನರು ಸೇರುವ ಕಾರ್ಯಕ್ರಮಗಳಿಗೆ ಹೊಸ ಕಾನೂನು ಜಾರಿಗೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದು, ಇನ್ಮುಂದೆ ನಡೆಯುವ ಸಭೆ ಸಮಾರಂಭಗಳಲ್ಲಿ ಕಾಲ್ತುಳಿತ ಘಟನೆಗಳು ನಡೆದರೆ, ಮೂರು ವರ್ಷ ಜೈಲು ಹಾಗೂ 5 ಲಕ್ಷ ರೂ. ದಂಡ ವಿಧಿಸುವ ಕಾನೂನು ಜಾರಿಗೆ ಸರ್ಕಾರ ನಿರ್ಧರಿಸಿದೆ.

 

18ನೇ ಆವೃತ್ತಿಯ ಐಪಿಎಲ್ ಫೈನಲ್ ಪಂದ್ಯಾಟದಲ್ಲಿ ಚೊಚ್ಚಲ ಕಪ್ ಎತ್ತಿ ಹಿಡಿದ ಆರ್‌ಸಿಬಿ ತಂಡಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಕಾಲ್ತುಳಿತ ಸಂಭವಿಸಿ 11 ಜನ ಆರ್‌ಸಿಬಿ ಅಭಿಮಾನಿಗಳು ಮೃತಪಟ್ಟಿದ್ದರು.

Also Read  ಅನಾರೋಗ್ಯಕ್ಕೆ ತುತ್ತಾದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ...!  ➤ ಆಸ್ಪತ್ರೆಗೆ ದಾಖಲು..!

 

 

ಇದರಿಂದಾಗಿ ಸೂಕ್ತ ಕಾನೂನು ರೂಪಿಸುವ ಉದ್ದೇಶದಿಂದ ಕಾನೂನು ಮತ್ತು ಸಂಸದೀಯ ಇಲಾಖೆಯು ‘ಕರ್ನಾಟಕ ಜನಸಂದಣಿ ನಿಯಂತ್ರಣ ಮಸೂದೆ- 2025’ರ ಕರಡು ಸಿದ್ಧಪಡಿಸಿದೆ. ಮುಂದಿನ ಅಧಿವೇಶನದಲ್ಲಿ ಗೃಹ ಇಲಾಖೆಯು ಈ ಮಸೂದೆಯನ್ನು ಮಂಡಿಸಲಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ. ಈ ಕಾನೂನು ಜಾರಿಗೆ ಬಂದರೆ ಕಾರ್ಯಕ್ರಮಗಳ ಆಯೋಜಕರು ಮೂರು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಅನುಭವಿಸುವುದರ ಜೊತೆಗೆ 5 ಲಕ್ಷ ರೂ. ದಂಡ ಕಟ್ಟಬೇಕಾಗುತ್ತದೆ. ಜತೆಗೆ, ಇಂತಹ ಘಟನೆಯು ಜಾಮೀನುರಹಿತ ಪ್ರಕರಣ ಎಂದು ಪರಿಗಣಿಸಲು ಮತ್ತು ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ವಿಚಾರಣೆಗೆ ಒಳಪಡಿಸಲು ಉದ್ದೇಶಿತ ಕಾನೂನು ಅವಕಾಶ ಕಲ್ಪಿಸಲಿದೆ.

error: Content is protected !!
Scroll to Top