94 ಸಿ ಅರ್ಜಿ ವಿಲೇವಾರಿಗೆ ಐದು ಸಾವಿರ ರೂ. ಲಂಚದ ಬೇಡಿಕೆ ► ಪುತ್ತಿಲ ಗ್ರಾಮ ಲೆಕ್ಕಾಧಿಕಾರಿ ಎಸಿಬಿ ಬಲೆಗೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಎ.05. ಮಹಿಳೆಯೋರ್ವರಿಂದ 94 ಸಿ ಅರ್ಜಿ ವಿಲೇವಾರಿಗೆ ಸಂಬಂಧಿಸಿದಂತೆ ಐದು ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಯೋರ್ವರು ಎಸಿಬಿ ಬಲೆಗೆ ಬಿದ್ದ ಘಟನೆ ತಾಲೂಕಿನ ಪುತ್ತಿಲದಲ್ಲಿ ನಡೆದಿದೆ.

ಪುತ್ತಿಲ ಗ್ರಾಮದ ಮಹಿಳೆಯೋರ್ವರಿಂದ ಗ್ರಾಮ ಲೆಕ್ಕಾಧಿಕಾರಿ ಹರೀಶ್ ಕುಮಾರ್ ಐದು ಸಾವಿರ ರೂ. ಲಂಚ ಸ್ವಿಕರಿಸುತ್ತಿದ್ದಾಗ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ರೆಡ್ ಹ್ಯಾಂಡಾಗಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯು 94ಸಿ ಯ ಅರ್ಜಿ ವಿಲೇವಾರಿಗೆ ಸಂಬಂಧಪಟ್ಟಂತೆ ಗ್ರಾಮದ ಮಹಿಳೆಯಿಂದ ಈಗಾಗಲೇ ರೂ. ಮೂರು ಸಾವಿರ ರೂ. ಲಂಚ ಪಡೆದಿದ್ದಲ್ಲದೆ ಕಳೆದ ಒಂದೂವರೆ ವರ್ಷಗಳಿಂದ ಮತ್ತೆ ಐದು ಸಾವಿರ ರೂ. ಲಂಚಕ್ಕಾಗಿ ಪೀಡಿಸುತ್ತಿದ್ದರೆನ್ನಲಾಗಿದೆ. ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸುರೇಂದ್ರ ಬಂಗಾಡಿ ನೀಡಿದ ದೂರಿನ ಮೇರೆಗೆ ಭ್ರಷ್ಟಾಚಾರ ನಿಗ್ರಹ ದಳದ ಎಸ್ಪಿ ಶೃತಿ ಎನ್.ಎಸ್ ನೇತೃತ್ವದಲ್ಲಿ ಡಿವೈಎಸ್ಪಿ ಸುಧೀರ್ ಹೆಗ್ಡೆ, ಹಾಗೂ ಸರ್ಕಲ್ ಇನ್ಸ್‌ಪೆಕ್ಟರ್ ಮೋಹನ್ ಕೊಟ್ಟಾರಿ ಹಾಗೂ ಸಿಬ್ಬಂದಿಗಳಾದ ಹರಿಪ್ರಸಾದ್, ಉಮೇಶ, ರಾಧಾಕೃಷ್ಣ ಕೆ., ರಾಧಾಕೃಷ್ಣ ಡಿ.ಎ, ಪ್ರಶಾಂತ್, ವೈಶಾಲಿ, ರಾಜೇಶ್, ರಾಕೇಶ್, ಗಣೇಶ್ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

Also Read  ಕ್ಷುಲ್ಲಕ ಕಾರಣಕ್ಕೆ 10 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

error: Content is protected !!
Scroll to Top