(ನ್ಯೂಸ್ ಕಡಬ) newskadaba.com ಜೂ. 16. ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯು ಭಾರೀ ಅವಾಂತರ ಸೃಷ್ಟಿಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಪರಿಣಾಮ ಹಲವೆಡೆ ಮರ, ಧರೆ ಕುಸಿದು ಅಪಾರ ಹಾನಿಯುಂಟಾಗಿದೆ.
ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬೆಳ್ತಂಗಡಿ ಸಮೀಪ ಗಡಾಯಿಕಲ್ಲು, ಬಂಡಾಜೆ, ಬೊಳ್ಳೆ, ದಿಡುಪೆ ಜಲಪಾತ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ಜೂ.16 ರಿಂದ ಮುಂದಿನ ಆದೇಶದವರೆಗೆ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ ಎಂದು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.