ಕೊಟ್ಟಿಯೂರು ದೇವಸ್ಥಾನಕ್ಕೆ ನಟ ದರ್ಶನ್ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 18. ನಟ ದರ್ಶನ್ ಅವರು ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಕೇರಳದ ಕೊಟ್ಟಿಯೂರು ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದಾರೆ. ಡೇವಿಲ್ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿರುವ ಅವರು ಶೂಟಿಂಗ್ ಮುಗಿದ ಬಳಿಕ ಕೊಟ್ಟಿಯೂರು ಶಿವ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಪತ್ನಿ ವಿಜಯಲಕ್ಷ್ಮಿ ಹಾಗೂ ನಟ ಧನ್ವೀರ್ ಕೂಡ ಜೊತೆಗಿದ್ದರು.

Scroll to Top