(ನ್ಯೂಸ್ ಕಡಬ) newskadaba.com ಕಡಬ, ಜೂ.16. ಪಂಪ್ ಸ್ವಿಚ್ ಹಾಕಲು ತೆರಳಿದ್ದ ಮಹಿಳೆಯೊಬ್ಬರು ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ದುರ್ಘಟನೆ ಸೋಮವಾರ ಸಂಜೆ ಕಡಬ ತಾಲೂಕಿನ ಎಡಮಂಗಲ ಸಮೀಪದ ಚಾರ್ವಾಕ ಎಂಬಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ದೋಳ್ಪಾಡಿ ನಿವಾಸಿ ಪುರಂದರ ಎಂಬವರ ಪತ್ನಿ ರೇಖಾ(35) ಎಂದು ತಿಳಿದು ಬಂದಿದೆ. ತಮ್ಮ ಮನೆಯ ನೀರಿನ ಪಂಪ್ ಸ್ವಿಚ್ ಹಾಕುವ ವಿದ್ಯುತ್ ಶಾಕ್ ಹೊಡೆದು ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ತಕ್ಷಣ ಅವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತಾದರೂ, ಆಸ್ಪತ್ರೆಗೆ ತಲುಪುವಷ್ಟರಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಈ ಸಂಬಂಧ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.