ವಿದ್ಯುತ್ ಪ್ರಸರಣ ಇಲಾಖೆಯಿಂದ 35 ಸಾವಿರ ಹುದ್ದೆ ಶೀಘ್ರ ಭರ್ತಿ- ಸಿಎಂ

(ನ್ಯೂಸ್ ಕಡಬ) newskadaba.com ಜೂ. 19. ವಿದ್ಯುತ್‌ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35,000 ಸಾವಿರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಮತ್ತು ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆಯನ್ನು ಕಾಯಂ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ಅವರು ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದ ನೌಕರರ ಸಂಘದ ವಜ್ರ ಮಹೋತ್ಸವವನ್ನು ಉದ್ಘಾಟಿಸಿ, ವಜ್ರಜ್ಯೋತಿ ಸ್ಮರಣ ಸಂಚಿಕೆ ಲೋಕಾರ್ಪಣೆ ಮಾಡಿ ಮಾತನಾಡಿದರು.

Scroll to Top