ಪುಂಜಾಲಕಟ್ಟೆ: ಕಾಲೇಜು ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಎ.05. ಕಾಲೇಜು ವಿದ್ಯಾರ್ಥಿಯೋರ್ವ ತನ್ನ ಹಾಸ್ಟೆಲ್ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ವಾಮದಪದವು ಎಂಬಲ್ಲಿ ಗುರುವಾರದಂದು ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡಾತನನ್ನು ವಾಮದಪದವು ಸರಕಾರಿ ಕಾಲೇಜಿನ ಬಿ.ಕಾಂ ವಿದ್ಯಾರ್ಥಿ, ಸಕಲೇಶಪುರ ನಿವಾಸಿ ಚಂದ್ರಶೇಖರ್(19) ಎಂದು ಗುರುತಿಸಲಾಗಿದೆ. ಈತ ವಾಮದಪದವು ಸರಕಾರಿ ಹಾಸ್ಟೇಲ್‌ನಲ್ಲಿ ತಂಗಿದ್ದು, ಗುರುವಾರದಂದು ತನ್ನ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲವಾದರೂ, ಪ್ರೇಮ ವೈಫಲ್ಯ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ. ಬೆಳ್ತಂಗಡಿ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ., ಪುಂಜಾಲಕಟ್ಟೆ ಠಾಣಾ ಸಬ್ ಇನ್ಸ್‌ಪೆಕ್ಟರ್ ಸುದರ್ಶನ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಮಂಗಳೂರು, ಎಟಿಎಂ ದರೋಡೆಗೆ ವಿಫಲ ಯತ್ನ ► ಪತ್ರಕರ್ತನ ಸಮಯಪ್ರಜ್ಞೆಯಿಂದ ತಪ್ಪಿದ ದರೋಡೆ ಯತ್ನ

error: Content is protected !!
Scroll to Top