(ನ್ಯೂಸ್ ಕಡಬ) newskadaba.com ಜೂ.17. ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಪ್ರತಿ ತಿಂಗಳಲ್ಲಿ ಒಂದು ಶನಿವಾರ ಸಂಭ್ರಮ ಶನಿವಾರ ಆಚರಿಸಲು ಶಿಕ್ಷಣ ಇಲಾಖೆ ಸೂಚಿಸಿದೆ. ಮಕ್ಕಳನ್ನು ಬಹುಮುಖ ಚಟುವಟಿಕೆಗಳಲ್ಲಿ ತೊಡಗಿಸಿವುದರ ಮೂಲಕ ನಾಗರಿಕ ಪ್ರಜ್ಞೆ ಬೆಳೆಸಲು, ವಿವಿಧ ಥೀಮ್ ಗಳನ್ನು ಆಧರಿಸಿ ವಿದ್ಯಾರ್ಥಿಗಳಿಗೆ 10 ಸ್ವಯಂ ವಿವರಣಾತ್ಮಕ ಮಾಡ್ಯುಲ್ ಹಾಗೂ ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಯನ್ನು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಈಗಾಗಲೇ ನೀಡಿದೆ.
2025-26ನೇ ಸಾಲಿನಲ್ಲಿ ಪ್ರತೀ ತಿಂಗಳು 3ನೇ ಶನಿವಾರ ಶಾಲಾ ಹಂತದಲ್ಲಿ ಸದರಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ತಿಳಿಸಲಾಗಿದ್ದು, ಮಕ್ಕಳನ್ನು ಬಹುಮುಖ ಚಟುವಟಿಕೆಗಳನ್ನು ತೊಡಗಿಸುವುದರ ಮೂಲಕ ನಾಗರಿಕ ಪ್ರಜ್ಞೆಯನ್ನು ಬೆಳೆಸಲು ವಿವಿಧ ವಿಷಯಗಳಲ್ಲಿ ವಿದ್ಯಾರ್ಥಿಗಳಿಗೆ 10 ಸ್ವಯಂ ವಿವರಣಾತ್ಮಕ ಮಾಡ್ಯೂಲ್ ಗಳನ್ನು ಹಾಗೂ ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಗಳನ್ನು ಸಿದ್ದಪಡಿಸಲಾಗಿದೆ. ಸಂಭ್ರಮ ಶನಿವಾರ ದಿನದಂದು ಜಿಲ್ಲಾ ಹಂತ ಮತ್ತು ಬ್ಲಾಕ್ ಹಂತದ ಎಲ್ಲಾ ಅಧಿಕಾರಿಗಳು ಹಾಗೂ ಸಿಆರ್
ಪಿಗಳು ಕಡ್ಡಾಯವಾಗಿ ಶಾಲೆಗಳಿಗೆ ಭೇಟಿ ನೀಡಿ ಅನುಪಾಲಿಸುವುದು ಹಾಗೂ ಅಗತ್ಯ ಮಾರ್ಗದರ್ಶನ ನೀಡುವುದು ಕಾರ್ಯಕ್ರಮದ ಯಶಸ್ಸಿಗೆ ಪಾಲ್ಗೊಳ್ಳಬೇಕು ಎಂದು ಸೂಚನೆ ನೀಡಿದೆ.