(ನ್ಯೂಸ್ ಕಡಬ) newsksdaba.com ಸುಳ್ಯ, ಜೂ. 19. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬುಧವಾರ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು.
ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ನೂತನ ಕಚೇರಿ, ಸುಳ್ಯ ತಾಲೂಕು ಆಸ್ಪತ್ರೆಯ ಬ್ಲಾಕ್ ಪಬ್ಲಿಕ್ ಹೆಲ್ತ್ ಲ್ಯಾಬ್ ಮತ್ತು ನೂತನ ಶವಗಾರ, ಸಾಮಾಜಿಕ ವಲಯ ಅರಣ್ಯಾಧಿಕಾರಿಗಳ ಕಚೇರಿ ಕಟ್ಟಡ, ಸುಳ್ಯ ನಗರ ಯೋಜನಾ ಪ್ರಾಧಿಕಾರ ಕಚೇರಿ ಮತ್ತಿತರ ಕಾಮಗಾರಿಗಳನ್ನು ಉದ್ಘಾಟಿಸಿದರು. ಸಂಧ್ಯಾ ಸುರಕ್ಷಾ ಮತ್ತು ವೃದ್ಧಾಪ್ಯ ವೇತನ ಮಂಜೂರಾತಿ ಪತ್ರವನ್ನು ಫಲಾನುಭವಿಗಳಿಗೆ ವಿತರಿಸಿದರು. ಕಾಡಾನೆ ದಾಳಿಯಿಂದ ಸಂತ್ರಸ್ತ ರೈತರಿಗೆ ಪರಿಹಾರ ಮೊತ್ತ ಚೆಕ್ ವಿತರಿಸಲಾಯಿತು.
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಗುಂಡೂರಾವ್ ಚಾಲನೆ









