ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ



(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 19. 2025-26ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ಓದುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನ.







ಸೇವಾಸಿಂಧು ಪೋರ್ಟಲ್  https://sevasindhuservices.karnataka.gov.in/ ಮೂಲಕ ಅರ್ಜಿಯನ್ನು ಸಲ್ಲಿಸಿ, ಅರ್ಜಿ ಸಲ್ಲಿಸಿದ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯ ನಂ-16ಸಿ, ಮೌಲಾನಾ ಅಬ್ದುಲ್ ಕಲಾಂ ಅಜಾದ್ ಭವನ, ಮಿಲ್ಲರ್ ಟ್ಯಾಂಕ್‍ಬೆಡ್ ರಸ್ತೆ, ವಸಂತನಗರ, ಬೆಂಗಳೂರು-560052 ಇಲ್ಲಿಗೆ ನಿಗದಿಪಡಿಸಿದ ದಿನಾಂಕದಂದು ಸಲ್ಲಿಸಬೇಕು. ಹಾರ್ಡ್ ಕಾಪಿಯನ್ನು ಸಲ್ಲಿಸುವ ದಿನಾಂಕವನ್ನು ಮುಂದಿನ ದಿನಗಳಲ್ಲಿ ಇ-ಮೇಲ್ ಮೂಲಕ ತಿಳಿಸಲಾಗುತ್ತದೆ.






ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್‍ಸೈಟ್ dom.karnataka gov.in/dakshina_kannada/public ಅಥವಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top