(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 19. 2025-26ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ರಾಷ್ಟೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದ (IIT, IIM, IIIT, NIT, IISER, AIIMS, NLU, INI & IuSLA) ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬೌದ್ಧ, ಜೈನ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಕೋರ್ಸ್ ಅವಧಿಯಲ್ಲಿ ಒಂದು ಬಾರಿಗೆ ರೂ. 2 ಲಕ್ಷ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನ.
ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in/ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್‍ಸೈಟ್ https://dom.karnataka.gov.in ವೀಕ್ಷಿಸಬಹುದು ಅಥವಾ ಹತ್ತಿರದ ಜಿಲ್ಲಾ ಮತ್ತು ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









