(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 19. ಪತಿ- ಪತ್ನಿಯ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು ವಿಕೋಪಕ್ಕೆ ತಿರುಗಿದ ಪರಿಣಾಮ ಪತಿ ಪತ್ನಿಯ ಕತ್ತು ಹಿಸುಕಿ ಸಾಯಿಸಿದಲ್ಲದೇ ತಾನೂ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ಗುರುವಾರದಂದು ನಡೆದಿದೆ.
ಮೃತರನ್ನು ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ ತಿಮ್ಮಪ್ಪ ರಾಮ ಮೂಲ್ಯ ಹಾಗೂ ಅವರ ಪತ್ನಿ ಜಯಂತಿ ಎಂದು ಗುರುತಿಸಲಾಗಿದೆ. ಸಣ್ಣ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಘಟನೆಗೆ ಸಂಬಂಧಿಸಿ ಮೃತ ಜಯಂತಿರವರ ತಂಗಿ ಶ್ರೀಮತಿ ಸುಜಾತ ಫರಂಗಿಪೇಟೆ ಎಂಬವರ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ 72/2025 U/S 103 BNS ಹಾಗೂ ಮೃತ ತಿಮ್ಮಪ್ಪರವರ ಅಣ್ಣ ಶ್ರೀ ವಿಶ್ವನಾಥ (55) ಸಜೀಪ ಮೂಡ, ಬಂಟ್ವಾಳರವರ ದೂರಿನ ಮೇರೆಗೆ UDR No 25/2025 U/S 194 BNSS ರಂತೆ ಪ್ರಕರಣ ದಾಖಲಾಗಿದೆ.








