(ನ್ಯೂಸ್ ಕಡಬ) newsksdaba.com ಜೂ. 19. ರಾಜ್ಯ ಸರಕಾರ ಈಗಾಗಲೇ ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಶೇಕಡ 4ರಷ್ಟು ಮೀಸಲಾತಿ ಒದಗಿಸಿದ್ದು, ಇದರ ಬೆನ್ನಲ್ಲೇ ಇದೀಗ ವಸತಿ ಯೋಜನೆಯಲ್ಲಿ ಮುಸ್ಲಿಮರಿಗೆ ಶೇಕಡ 10ರಷ್ಟು ಇದ್ದಂತಹ ಮೀಸಲಾತಿಯನ್ನು ಶೇಕಡ 15ಕ್ಕೆ ಹೆಚ್ಚಳ ಮಾಡಿ ಸಚಿವ ಸಂಪುಟ ಅನುಮೋದನೆ ನೀಡಿದೆ.
ವಸತಿ ಯೋಜನೆಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಸಚಿವ ಸಂಪುಟ ಸಭೆಯಲ್ಲೂ ಈ ವಿಷಯದ ಬಗ್ಗೆ ಪ್ರಸ್ತಾಪ ಮಾಡಿದ್ದು. ಹಾಗಾಗಿ ವಸತಿ ಯೋಜನೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಖಚಿತ ಎಂದು ಸಚಿವ ಸಂಪುಟ ಅನುಮೋದನೆ ನೀಡಿದೆ.













