ಸಿಎಂ ಸಿದ್ದರಾಮಯ್ಯಗೆ ಕೋರ್ಟ್ ನೋಟೀಸ್..!



(ನ್ಯೂಸ್ ಕಡಬ) newsksdaba.com ಜೂ. 19. ಅತಿಹೆಚ್ಚು ಅಪರಾಧ ಕೃತ್ಯಗಳಾಗುತ್ತಿರುವುದೇ ಆರಸ್ಸೆಸ್​ ಮತ್ತು ಬಜರಂಗದಳದಿಂದ ಎಂದು ಸಿಎಂ ಸಿದ್ದರಾಮಯ್ಯರವರು ಸದನದಲ್ಲೇ ಬಹಿರಂಗವಾಗಿ ಟೀಕಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯವು ಸಿಎಂ ಗೆ ನೋಟಿಸ್ ಜಾರಿ ಮಾಡಿದ್ದು, ಜೂನ್ 26ರೊಳಗೆ ಕೋರ್ಟ್ ನೋಟಿಸ್​ ಗೆ ಉತ್ತರಿಸಬೇಕು ಎಂದು ಹೇಳಲಾಗಿದೆ.







 

ಅತಿಹೆಚ್ಚು ಅಪರಾಧ ಕೃತ್ಯಗಳಾಗುತ್ತಿರುವುದೇ ಆರ್‌ಎಸ್‌ಎಸ್‌ ಬಜರಂಗದಳದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸದನದಲ್ಲೇ ಹೇಳಿಕೆ ನೀಡಿದ್ದರಿಂದ ಇಡೀ ಸದನವೇ ಅಲ್ಲೋಲ ಕಲ್ಲೋಲವಾಗಿತ್ತು. ಅಲ್ಲದೇ ಬಿಜೆಪಿ ಶಾಸಕರು ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ಖಂಡಿಸಿ ವಾಗ್ದಾಳಿ ಕೂಡಾ ನಡೆಸಿದ್ದರು.






ಈ ಬಗ್ಗೆ ಜನರ ಭಾವನೆಗಳಿಗೆ ಧಕ್ಕೆ ಆರೋಪದಡಿ ಕಿರಣ್ ಎನ್ನುವರು ಸಿದ್ದರಾಮಯ್ಯ ವಿರುದ್ಧ ಕೋರ್ಟ್​ ನಲ್ಲಿ ಪ್ರಕರಣ ದಾಖಲಿಸಿದ್ದರು. ಈ ಕೇಸ್ ದಾಖಲಿಸಿಕೊಳ್ಳುವ ಮುನ್ನ ಸಿಎಂ ಸಿದ್ದರಾಮಯ್ಯನವರ ವಾದ ಆಲಿಸಲು ಕೋರ್ಟ್ ಅವಕಾಶ ನೀಡಿದೆ. ಹೀಗಾಗಿ ಬಿಎನ್ ಎಸ್ಎಸ್ ಸೆಕ್ಷನ್ 223 ಅಡಿಯಲ್ಲಿ ಸಿದ್ದರಾಮಯ್ಯಗೆ ನೋಟಿಸ್ ನೀಡಲಾಗಿದೆ.

error: Content is protected !!
Scroll to Top