ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ – News Kadaba

ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newsksdaba.com ಜೂ. 19. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

 

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ: ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ- ರೂ. 2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ- ರೂ. 1 ಲಕ್ಷ. ವೆಬ್‍ಸೈಟ್ https://shp.karnataka.gov.in/bcwd ಮೂಲಕ ಆನ್‍ಲೈನ್‍ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 25 ಕೊನೆಯ ದಿನ.

 

ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ https://shp.karnataka.gov.in/bcwd ವೀಕ್ಷಿಸಬಹುದು.

 

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ಮುಂಖಾತರ ಅಥವಾ ಸಹಾಯವಾಣಿ ಸಂಖ್ಯೆ 8050770004 ಮತ್ತು 8050770005) ಜಿಲ್ಲಾ/ತಾಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top