ಎಂ.ಫಿಲ್-ಪಿ.ಹೆಚ್.ಡಿ ಫೆಲೋಶಿಪ್: ಅರ್ಜಿ ಆಹ್ವಾನ



(ನ್ಯೂಸ್ ಕಡಬ) newsksdaba.com ಜೂ. 19. 2025-26ನೇ ಸಾಲಿನಲ್ಲಿ ಎಂ.ಫಿಲ್ ಮತ್ತು ಪಿ.ಹೆಚ್.ಡಿ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ  ಎಂ.ಫಿಲ್ ಮತ್ತು ಪಿ.ಹೆಚ್.ಡಿ ಫೆಲೋಶಿಪ್ ಯೋಜನೆಯಡಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ನಿಗದಿತ ಅರ್ಜಿಯನ್ನು ಸೇವಾ ಸಿಂಧು  ಆನ್‍ಲೈನ್ ಪೋರ್ಟಲ್ https://sevasindhuservices.karnataka.gov.in/ ಮೂಲಕ ಅರ್ಜಿ ಸಲ್ಲಿಸಬಹುದು.
 







ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನ.






 

ಹೆಚ್ಚಿನ ಮಾಹಿತಿಗೆ  ಪಾಂಡೇಶ್ವರದ ಓಲ್ಡ್ ಕೆಂಟ್ ರಸ್ತೆಯ ಮೌಲಾನಾ ಆಜಾದ್ ಭವನದ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಛೇರಿ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top