ಮಂಗಳೂರು ವಿವಿ: ಪಿ.ಹೆಚ್.ಡಿ. ಪ್ರವೇಶಾತಿ

(ನ್ಯೂಸ್ ಕಡಬ) newsksdaba.com ಜೂ. 19. ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ ವಿಭಾಗಗಳು, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು  ಹಾಗೂ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರಗಳಲ್ಲಿ ಪಿ.ಹೆಚ್.ಡಿ ಕಾರ್ಯಕ್ರಮಕ್ಕೆ ಲಭ್ಯವಿರುವ ಖಾಲಿ ಸೀಟುಗಳಿಗೆ ನೋಂದಾಯಿಸಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ  ದ್ವಿಪ್ರತಿಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

 

ನಿಗದಿತ ಅರ್ಜಿ ನಮೂನೆಯನ್ನು ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ ಅಥವಾ ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜಿನ ಸಂಬಂಧಪಟ್ಟ ವಿಭಾಗಗಳಿಂದ ರೂ. 1,500ನ್ನು  (ಎಸ್‍ಸಿ/ಎಸ್‍ಟಿ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದಲ್ಲಿ ರೂ.750) ಚಲನ್/ ರಾಷ್ಟ್ರೀಕೃತ ಬ್ಯಾಂಕಿನಿಂದ ಹಣಕಾಸು ಅಧಿಕಾರಿ, ಮಂಗಳೂರು ವಿಶ್ವವಿದ್ಯಾನಿಲಯ ಇವರ ಹೆಸರಿನಲ್ಲಿ ಪಡೆದ ಡಿ.ಡಿ. ಮುಖಾಂತರ ಪಾವತಿಸಿ ಪಡೆಯಬಹುದು.

 

ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ಸ್ನಾತಕೋತ್ತರ ವಿಭಾಗದ ಅಧ್ಯಕ್ಷರು/ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರದ ಮುಖ್ಯಸ್ಥರಿಗೆ ಜುಲೈ 19 ರೊಳಗೆ ಸಲ್ಲಿಸಬೇಕು.

 

ಖಾಲಿ ಇರುವ ಸೀಟುಗಳು/ ಮೀಸಲಾತಿ ವಿವರ ಮತ್ತು ಪಿಹೆಚ್.ಡಿ ಕಾರ್ಯಕ್ರಮಗಳನ್ನು ನಿಯಂತ್ರಿಸುವ ನಿಯಮಾವಳಿ ಹಾಗೂ ಮಾರ್ಗಸೂಚಿಯ ವಿವರ ಮತ್ತು ಅರ್ಜಿ ನಮೂನೆಗಳಿಗೆ ಮಂಗಳೂರು ವಿಶ್ವವಿದ್ಯಾನಿಲಯದ ವೆಬ್‍ಸೈಟ್ www.mangaloreuniversity.ac.in ಮೂಲಕ ಪಡೆದುಕೊಳ್ಳಬಹುದು ಎಂದು ಕುಲಸಚಿವರ ಪ್ರಕಟಣೆ ತಿಳಿಸಿದೆ.

Scroll to Top