ಬಮೂಲ್ ಅಧ್ಯಕ್ಷರಾಗಿ ಡಿಕೆ ಸುರೇಶ್ ಅವಿರೋಧ ಆಯ್ಕೆ

(ನ್ಯೂಸ್ ಕಡಬ) newskadaba.com ಜೂ. 20. ಸಹಕಾರ ಹಾಲು ಒಕ್ಕೂಟ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಸಂಘದ ಅಧ್ಯಕ್ಷರಾಗಿ ಡಿ.ಕೆ.ಸುರೇಶ್‌ ರವರುಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಡಿ.ಕೆ.ಸುರೇಶ್‌ ಅವರು ಬೆಂಗಳೂರು ಡೈರಿ ಸರ್ಕಲ್‌ ಕಚೇರಿಯಲ್ಲಿ ಬಮೂಲ್‌ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಈ ಸ್ಥಾನಕ್ಕೆ ಯಾರೂ ಉಮೇದುವಾರಿಕೆ ಸಲ್ಲಿಕೆ ಇಲ್ಲದ ಕಾರಣ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

Scroll to Top