(ನ್ಯೂಸ್ ಕಡಬ) newskadaba.com ಜೂ. 20. ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಲ್ಕು ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅಭಿವೃದ್ದಿಗೆ ಅನುದಾನ ನೀಡುವಂತೆ ಶಾಸಕ ಅಶೋಕ್ ರೈ ಅವರು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಅವರಿಗೆ ಗುರುವಾರದಂದು ಮನವಿ ಸಲ್ಲಿಸಿದ್ದಾರೆ.
ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಅವರು, ಪುತ್ತೂರಿನ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿಗೆ 4 ಕೋಟಿ, ವಿಟ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ 2 ಕೋಟಿ, ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ 2 ಕೋಟಿ ಹಾಗೂ ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ 2 ಕೋಟಿ ಅನುದಾನ ನೀಡುವಂತೆ ಮನವಿ ಸಲ್ಲಿಸಿದ್ದಾರೆ.
ಈ ನಾಲ್ಕು ಕಾಲೇಜುಗಳ ಅಭಿವೃದ್ದಿಗೆ ಅನುದಾನ ಅಗತ್ಯವಾಗಿದ್ದು, ಗ್ರಾಮೀಣ ಪ್ರದೇಶದ ಹೆಚ್ಚಿನ ವಿದ್ಯಾರ್ಥಿಗಳು ಈ ನಾಲ್ಕು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಕಾಲೇಜಿಗೆ ತರಗತಿ ಕೊಠಡಿ, ಲೈಬ್ರೆರಿ ಹಾಗೂ ಲ್ಯಾಬೋರೇಟರಿ ಸೇರಿದಂತೆ ಅಗತ್ಯ ಅಭಿವೃದ್ದಿ ಕೆಲಸಗಳು ನಡೆಯಬೇಕಿದೆ ಎಂದು ಶಾಸಕರು ತಿಳಿಸಿದ್ದಾರೆ.













