(ನ್ಯೂಸ್ ಕಡಬ) newskadaba.com ಜೂ. 20. ಗುರುವಾರದಂದು ಕಾಂಗ್ರೆಸ್ ಯುವ ನಾಯಕ, ಲೋಕಸಭಾ ವಿರೋಧ ಪಕ್ಷದ ನಾಯಕರ ರಾಹುಲ್ ಗಾಂಧಿಯವರು ತನ್ನ 54ನೇ ಹುಟ್ಟುಹವನ್ನು ಆಚರಿಸಿಕೊಂಡಿದ್ದಾರೆ. ರಾಹುಲ್ ಗಾಂಧಿ ಜನ್ಮದಿನ ಹಿನ್ನೆಲೆ ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ಕೆಪಿಸಿಸಿ ಕಚೇರಿಯಲ್ಲಿ ನೇತ್ರದಾನ ಶಿಬಿರ ನಡೆಸಲಾಯಿತು.
ಈ ಪ್ರಯುಕ್ತ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ಕಣ್ಣುಗಳನ್ನು ಗಿಫ್ಟ್ ನೀಡಿದ್ದಾರೆ. ಈ ಶಿಬಿರದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನೇತ್ರದಾನ ಪತ್ರಕ್ಕೆ ಸಹಿ ಹಾಕಿದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ನಮ್ಮ ಯುವ ಕಾಂಗ್ರೆಸ್ ವತಿಯಿಂದ ನೇತ್ರದಾನ ಶಿಬಿರ ಹಮ್ಮಿಕೊಂಡಿದ್ದಾರೆ. ನಾನು ಕೂಡ ನನ್ನ ನೇತ್ರ ದಾನ ಮಾಡಿದ್ದೇನೆ ಎಂದು ತಿಳಿಸಿದರು.













