250 ನಿವೇಶನ ರಹಿತ ಬಡಕುಟುಂಬಗಳಿಗೆ ಶೀಘ್ರವೇ ಮನೆ ನಿರ್ಮಾಣ- ಅಶೋಕ್ ರೈ



(ನ್ಯೂಸ್ ಕಡಬ) newskadaba.com ಜೂ. 20. ಚುನಾವಣೆಗೂ ಮೊದಲೇ ತನ್ನ ರೈ ಎಸ್ಟೇಟ್ ಆ್ಯಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಮೂಲಕ ನಿವೇಶನಕ್ಕೆ ನೋಂದಣಿ ಮಾಡಿಸಿಕೊಂಡ 250 ಮಂದಿ ನಿವೇಶನ ರಹಿತ ಬಡಕುಟುಂಬಗಳಿಗೆ ನಿವೇಶನದ ಜೊತೆಗೆ ಮನೆ ನಿರ್ಮಾಣ ಮಾಡಿಕೊಡಲಾಗುವುದು ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.







ವಿಟ್ಲ ಮುಡ್ನೂರು ಗ್ರಾಮದ ಕಟ್ಟತ್ತಿಲದಲ್ಲಿ ಮನೆ ನಿರ್ಮಾಣವಾಗಲಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಈಗಾಗಲೇ ಮನೆ ನಿರ್ಮಾಣಕ್ಕೆ ಜಾಗ ಖರೀದಿ ಮಾಡಿದ್ದು, ಆ ಜಾಗದಲ್ಲೇ ಮನೆ ನಿರ್ಮಾಣ ಕಾರ್ಯ ನಡೆಯಲಿದೆ. ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ಅತ್ಯುತ್ತಮ ಪ್ರದೇಶವಾಗಿ ಇದನ್ನು ಅಭಿವೃದ್ದಿ ಪಡಿಸಲಾಗುವುದು ಎಂದು ಹೇಳಿದರು.






ಅಶೋಕ್ ರೈ ಅವರು ಶಾಸಕರಾಗುವ ಮೊದಲೇ ಅನೇಕ ಮಂದಿ ನಿವೇಶನ ಇಲ್ಲದವರು ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದ್ದು, ಈ ಪೈಕಿ ಅರ್ಹ 250 ಕುಟುಂಬಗಳನ್ನು ಮೊದಲ ಕಂತಿನಲ್ಲಿ ಆಯ್ಕೆ ಮಾಡಲಾಗುತ್ತದೆ. ನಿವೇಶನ ರಹಿತ ವಿಧವೆಯರು, ಪತಿ ಅನಾರೋಗ್ಯದಿಂದಿದ್ದು ಬಾಡಿಗೆ ಮನೆಯಲ್ಲಿ ವಾಸ ಮಾಡುವವರು, ಯಾವುದೇ ಆರ್ಥಿಕ ಶಕ್ತಿಯಿಲ್ಲದೇ ಬಾಡಿಗೆ ಮನೆಯಲ್ಲಿ ವಾಸವಾಗಿ ಮನೆ ಬಾಡಿಗೆಯನ್ನು ನೀಡಲು ಅಶಕ್ತರಾದ ಕುಟುಂಬಗಳಿಗೆ ಈ ನಿವೇಶನದಲ್ಲಿ ಮನೆ ನಿರ್ಮಾಣ ಮಾಡಲಾಗುತ್ತದೆ. ಶಾಸಕ ಅಶೋಕ್ ರೈ ಅವರೇ ತಮ್ಮ ಸ್ವಂತ ಖರ್ಚಿನಿಂದ 250 ಮನೆಗಳನ್ನು ನಿರ್ಮಿಸಿಕೊಡಲಿದ್ದು , ನಿವೇಶನದ ಅಭಿವೃದ್ದಿ ಕಾಮಗಾರಿ ಸಮರೋಪಾದಿಯಲ್ಲಿ ನಡೆಯುತ್ತಿದೆ.

error: Content is protected !!
Scroll to Top