(ನ್ಯೂಸ್ ಕಡಬ) newskadaba.com ಜೂ. 20. ಕಾಂಗ್ರೆಸ್ ಪಕ್ಷದ ಧೀಮಂತ ನಾಯಕ, ಲೋಕಸಭೆಯ ವಿರೋಧ ಪಕ್ಷದ ನಾಯಕ ಸನ್ಮಾನ್ಯ ರಾಹುಲ್ ಗಾಂಧಿ ಅವರ ಜನ್ಮದಿನದ ಅಂಗವಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಫೈಝಲ್ ಕಡಬ ಅವರ ನೇತೃತ್ವದಲ್ಲಿ ಕಡಬದ ಎರಡು ಶಾಲೆಗಳ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಿ ಸಿಹಿಯನ್ನು ಹಂಚಿ ಸಂಭ್ರಮದೊಂದಿಗೆ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಪಿ.ಕೆ., ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಪಿ.ಪಿ. ವರ್ಗೀಸ್, ಕಡಬ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸತೀಶ್ ನಾಯ್ಕ್, ಕಾರ್ಯದರ್ಶಿ ಶರೀಫ್ ಕಡಬ, ವಿಜಯ ಕೊಣಾಜೆ, ಮುರಾಝನ್ ಕಡಬ, ಜಬ್ಬಾರ್ ಕಡಬ, ಸಮೀರ್ ಕಡಬ ಹಾಗೂ ಸಿದ್ದೀಕ್ ಬಿಡಿಎಸ್ ಅವರು ಉಪಸ್ಥಿತರಿದ್ದರು.









