ಕಡಬ ಸಮುದಾಯ ಆಸ್ಪತ್ರೆಗೆ ಖಾಯಂ ವೈದ್ಯರ ನೇಮಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಡಬ ಬ್ಲಾಕ್ ಯೂತ್ ಕಾಂಗ್ರೆಸ್ ಮನವಿ

(ನ್ಯೂಸ್ ಕಡಬ) newskadaba.com ಜೂ. 20. ಕಡಬ ಸಮುದಾಯ ಆಸ್ಪತ್ರೆಗೆ ಖಾಯಂ ವೈದ್ಯಾಧಿಕಾರಿಯನ್ನು ನೇಮಿಸುವಂತೆ ಆಗ್ರಹಿಸಿ ಕಡಬ ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷ ಮುಹಮ್ಮದ್ ಶಾಕೀರ್ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಅವರಿಗೆ ಮನವಿ ನೀಡಿದರು.

ಕಡಬ ತಾಲೂಕು ಕೇಂದ್ರದಲ್ಲಿರುವ ಈ ಸಮುದಾಯ ಆಸ್ಪತ್ರೆ ಸುಸಜ್ಜಿತ ಕಟ್ಟಡವನ್ನು ಹೊಂದಿದ್ದು, ದಿನವೊಂದಕ್ಕೆ 300ಕ್ಕೂ ಹೆಚ್ಚು ವಿವಿಧ ಖಾಯಿಲೆಯ ರೋಗಿಗಳು ಚಿಕಿತ್ಸೆಗಾಗಿ ಬರುತ್ತಾರೆ. ಇಲ್ಲಿನ ಖಾಯಂ ವೈದ್ಯಾಧಿಕಾರಿ ನಿವೃತ್ತಿಯಾಗಿ ಎರಡು ವರ್ಷಗಳಾಗಿದ್ದು, ಹಲವು ಬಾರಿ ಖಾಯಂ ವೈದ್ಯರ ನೇಮಕಾತಿಗಾಗಿ ಸಂಬಂಧಪಟ್ಟವರಿಗೆ ಈ ಬಗ್ಗೆ ಮನವಿ ಸಲ್ಲಿಸಲಾಗಿದೆ. ಇಲ್ಲಿ ವೈದ್ಯರಿಲ್ಲದೇ ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ಸಿಗದೇ ಹಲವು ರೋಗಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಪರಿಶೀಲಿಸಿ ಖಾಯಂ ವೈದ್ಯರ ನೇಮಕ ಮಾಡಬೇಕೆಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಮನವಿ ನೀಡುವ ಸಂದರ್ಭ ಕಡಬ ತಾ.ಪಂ ಮಾಜಿ ಸದದ್ಯ ಫಝಲ್ ಕೋಡಿಂಬಾಳ ಜೊತೆಗಿದ್ದರು.

Scroll to Top