(ನ್ಯೂಸ್ ಕಡಬ) newskadaba.com ಜೂ. 21. 2025-26ನೇ ಸಾಲಿಗೆ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿಯನ್ನು ನೀಡಲು ಪ್ರತಿ ವರ್ಷದಂತೆ ಈ ಸಾಲಿನಲ್ಲಿಯೂ ಸಹ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಉದ್ದೇಶಿಸಿದೆ.
ಆಸಕ್ತರು www.depwd.gov.in ಅಥವಾ www.depwd.gov.in ನಲ್ಲಿ ಅರ್ಜಿಗಳನ್ನು ಇಂಗ್ಲಿಷ್ ಭಾಷೆಯಲ್ಲಿ ಭರ್ತಿ ಮಾಡಿ ಜುಲೈ 15 ರ ಒಳಗೆ ಆನ್ಲೈನ್ ಮೂಲಕ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕಛೇರಿಯನ್ನು ಸಂಪರ್ಕಿಸಬಹುದು ಎಂದು ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









