ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ: ಅರ್ಜಿ ಆಹ್ವಾನ – News Kadaba

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 21. ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (SSP) ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆಗೆ ಅನ್‍ಲೈನ್ ಅರ್ಜಿ ಅಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು, ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳನ್ನು ಪಡೆದಿರಬೇಕು ಹಾಗೂ ಕುಟುಂಬದ ವಾರ್ಷಿಕ ಆದಾಯ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ರೂ. 2 ಲಕ್ಷ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿಗಳಿಗೆ ರೂ. 2.50ಲಕ್ಷ ಒಳಗಿರಬೇಕು. ಅರ್ಜಿಯನ್ನು ಎಸ್.ಎಸ್.ಪಿ ಪೋರ್ಟಲ್ https://ssp.postmatric.karnataka.gov.in ಮೂಲಕ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30  ಕೊನೆಯ ದಿನ. ವಿದ್ಯಾರ್ಥಿವೇತನದ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್‍ ಸೈಟ್ https://dom.karnataka.gov.in ಅಥವಾ ಎಸ್.ಎಸ್.ಪಿ  ಪೋರ್ಟಲ್ https://ssp.postmatric.karnataka.gov.in (ಸಹಾಯವಾಣಿ: 8277799990) ಸಂಪರ್ಕಿಸಬಹುದು ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಕ್ಕೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top