(ನ್ಯೂಸ್ ಕಡಬ) newskadaba.com ಜೂ. 21. ಬೆಂಗಳೂರಿನ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ತನಿಖೆ ನಡೆಯುತ್ತಿದ್ದು, ಇದೀಗ ವಿಚಾರಣೆಗೆ ಹಾಜರಾಗುವಂತೆ ಜಿಲ್ಲಾಧಿಕಾರಿ ಬಿ.ದಯಾನಂದ್ ಗೆ ನೋಟಿಸ್ ನೀಡಿದ್ದಾರೆ.
ಆದರೆ ಮಾಜಿ ಕಮಿಷನರ್ ಬಿ ದಯಾನಂದ ಅವರು ವಿಚಾರಣೆಗೆ ಗೈರು ಹಾಜರಾಗಿದ್ದಾರೆ.
ಇತ್ತೀಚೆಗಷ್ಟೇ ಆರ್ ಸಿಬಿ ವಿಜಯೋತ್ಸವದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ತನಿಖೆ ನಡೆಸುತ್ತಿರುವ ವಿಚಾರಣಾ ಅಧಿಕಾರಿಯಾಗಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್ ಎದುರು ಶುಕ್ರವಾರದಂದು ಇಬ್ಬರು ಡಿಸಿಪಿಗಳು ಸೇರಿ ಆರು ಮಂದಿ ಪೊಲೀಸ್ ಅಧಿಕಾರಿಗಳು ವಿಚಾರಣೆಗೆ ಹಾಜರಾಗಿದ್ದು, ಆದರೆ ನಗರದ ಮಾಜಿ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರು ವಿಚಾರಣೆಗೆ ಗೈರು ಹಾಜರಾಗಿದ್ದಾರೆ.













