ರಾಜ್ಯದ ಸರಕಾರಿ ಶಾಲೆಗಳಲ್ಲಿ ‘AI’ ಹಾಜರಾತಿ ತಂತ್ರಜ್ಞಾನ ಬಳಕೆಗೆ ಮುಂದಾದ ಸರಕಾರ

(ನ್ಯೂಸ್ ಕಡಬ) newskadaba.com ಜೂ. 22. ಪ್ರಸಕ್ತ ವರ್ಷದಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹೆಸರು ಕೂಗಿ ಹಾಜರಾತಿ ಪಡೆಯುವುದಕ್ಕೆ ಬದಲಾಗಿ, ಶಿಕ್ಷಕರು ಮೊಬೈಲ್‌ನಲ್ಲೇ ವಿದ್ಯಾರ್ಥಿಗಳ ಫೋಟೋ ಕ್ಲಿಕ್ಕಿಸಿಕೊಳ್ಳುವ ಮೂಲಕ ಹಾಜರಾತಿ ದಾಖಲಿಸಿಕೊಳ್ಳಲಿದ್ದಾರೆ.

ನಿರಂತರ’ ಯೋಜನೆಯಡಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳು ಸೇರಿ 52,686 ಶಾಲೆಗಳ 52 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಹಾಜರಾತಿಯನ್ನು ಕೃತಕ ಬುದ್ಧಿಮತ್ತೆ ಚಾಲಿತ, ಮುಖ ಚಹರೆ ಗುರುತು ಆಧಾರಿತವಾಗಿ (ಎಐ ಫೇಶಿಯಲ್ ರಿಕಗ್ನಿಷನ್) ತೆಗೆದುಕೊಳ್ಳಲಾಗುತ್ತದೆ. ಈ ಯೋಜನೆಯು ಸುಮಾರು 5 ಕೋಟಿ ರು. ವೆಚ್ಚದ್ದಾಗಿದೆ.

ಶಿಕ್ಷಕರ ಮೊಬೈಲ್ ಆಯಪ್ ಬಳಸಿ ವಿದ್ಯಾರ್ಥಿಗಳ ಫೋಟೋ ಸೆರೆ ಹಿಡಿಯಲಾಗುತ್ತದೆ. ಫೋಟೋ ಮೂಲಕವೇ ವಿದ್ಯಾರ್ಥಿಗಳ ಹಾಜರಾತಿ ಖಚಿತಪಡಿಸುವ ವ್ಯವಸ್ಥೆ ಇರಲಿದೆ. ಇದರಿಂದ ನಕಲಿ ಹಾಜರಾತಿ ತಡೆಗೆ ಅನುಕೂಲವಾಗಲಿದೆ.

Scroll to Top