ಬಂಟ್ವಾಳ: ವಂಚಿಸಿ ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಎ.06. ವಂಚನೆ ಪ್ರಕರಣಕ್ಕೊಳಗಾಗಿ ಕಳೆದ ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ ಘಟನೆ ಶುಕ್ರವಾರದಂದು ನಡೆದಿದೆ.

 

ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವಳವೂರು ಉಮ್ಮರಗುಡ್ಡೆ ನಿವಾಸಿ ಶರೀಫ್ ಎಂಬವರ ಪುತ್ರ ಹನೀಫ್ ಎಂದು ಗುರುತಿಸಲಾಗಿದೆ. ಈತ ವಂಚನೆ ಪ್ರಕರಣದಲ್ಲಿ ಭಾಗಿಯಾಗಿ 2015 ರಿಂದ ತಲೆಮರೆಸಿಕೊಂಡಿದ್ದನೆನ್ನಲಾಗಿದ್ದು, ಶುಕ್ರವಾರದಂದು ತುಂಬೆ ಗ್ರಾಮದ ಮದಕ ಎಂಬಲ್ಲಿದ್ದಾನೆಂಬ ಖಚಿತ ಮಾಹಿತಿಯ ಮೇರೆಗೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

Also Read  ಕಡಬ: ಸರಸ್ವತೀ ವಿದ್ಯಾಲಯ ದೀಕ್ಷಾ ಸಮಾರಂಭ

error: Content is protected !!
Scroll to Top