ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ- ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ



(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 25. ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಸಹಾಯಧನ/ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು:- ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಕಾಡುಗೊಲ್ಲ ಜಾತಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು. ನಿಗಮದ/ ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುತ್ತದೆ.







ಅರಿವು ಯೋಜನೆಯಡಿ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು ವಾರ್ಷಿಕ ವರಮಾನ ರೂ.3.50 ಲಕ್ಷ. ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರರು 21 ವರ್ಷ ಮೇಲ್ಪಟ್ಟು 45 ವರ್ಷದ  ಮಿತಿಯಲ್ಲಿರಬೇಕು. ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. 98,000 ಮತ್ತು ನಗರ ಪ್ರದೇಶದವರಿಗೆ ರೂ. 1,20,000 ಗಳ ಮಿತಿಯೊಳಗಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ 33%, ವಿಕಲಚೇತನರಿಗೆ 5% ಹಾಗೂ ತೃತೀಯ ಲಿಂಗಿಗಳಿಗೆ ಶೇ1% ಮೀಸಲಾತಿ ಇರಿಸಿದೆ.






 

ನಿಗಮದ ಯೋಜನೆಗಳ ವಿವರ: – ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ನೇರಸಾಲ, ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆ

 

ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 2. ಮಂಗಳೂರು ಒನ್ ಕರ್ನಾಟಕ-ಒನ್/ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ನಿಗಮದ ಕೇಂದ್ರ ಕಛೇರಿಯ ದೂರವಾಣಿ ಸಂಖ್ಯೆ 7899899039 ಅಥವಾ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಕಛೇರಿಗಳಲ್ಲಿ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top