(ನ್ಯೂಸ್ ಕಡಬ) newskadaba.com ಜೂ. 25. ಗ್ರಾಮೀಣ ಯುವಜನತೆಯು ಆರೋಗ್ಯಕರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಸಹಾಯಕವಾಗುವ ವಾತಾವರಣವನ್ನು ಸೃಜಿಸಲು 2025-26ನೇ ಸಾಲಿನ ಯುವ ಚೈತನ್ಯ ಯೋಜನೆಯಡಿ ರಾಜ್ಯದ ಆಯ್ದ ಯುವ ಸಂಘಗಳಿಗೆ ಕ್ರೀಡಾ ಸಾಮಾಗ್ರಿಗಳನ್ನು ಒದಗಿಸಲು ಯುವನೀತಿ ಅನುಷ್ಠಾನದ ಅಡಿಯಲ್ಲಿ ಅನುದಾನ ನಿಗದಿಪಡಿಸಲಾಗಿದೆ.
ಜಿಲ್ಲೆಯಲ್ಲಿ ಸಕ್ರಿಯವಾಗಿರುವ 4 ಯುವ ಸಂಘ (ಗ್ರಾಮೀಣ ಪ್ರದೇಶದ ಶೇ 70%ರಷ್ಟು ಹಾಗೂ ನಗರ ಪ್ರದೇಶದ ಶೇ. 30%ರಷ್ಟು) ಗಳನ್ನು ನಿಯಮಾನುಸಾರ ಆಯ್ಕೆ ಮಾಡಿ ಪಟ್ಟಿಯನ್ನು ಬೆಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತರಿಗೆ ಕಳುಹಿಸಲಾಗುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಕ್ರಿಯವಾಗಿರುವ ಹಾಗೂ ಕರ್ನಾಟಕ ರಾಜ್ಯ ಸಂಘ ಸಂಸ್ಥೆಗಳ ಕಾಯ್ದೆ 1960ರ ಅಡಿಯಲ್ಲ ನೊಂದಾವಣೆಗೊಂಡಿರುವ ಯುವಕ/ಯುವತಿ ಸಂಘಗಳು ಸೇವಾಸಿಂಧು ಪೋರ್ಟಲ್ ಮುಖಾಂತರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮಾನ್ಯತೆ ಪಡೆದಲ್ಲಿ ಅಂತಹ ಯುವಕ/ಯುವತಿ ಸಂಘಗಳನ್ನು ಯುವ ಚೈತನ್ಯ ಯೋಜನೆಗೆ ಪರಿಗಣಿಸಲಾಗುತ್ತದೆ. ಆದ್ದರಿಂದ ಆಸಕ್ತ ಯುವಕ/ಯುವತಿ ಸಂಘಗಳು ಆನ್‍ಲೈನ್ ಮೂಲಕ ಜುಲೈ 25ರೊಳಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮಾನ್ಯತೆ ಪಡೆಯುವಂತೆ ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು, ಮಂಗಳಾ ಕ್ರೀಡಾಂಗಣ, ಮಂಗಳೂರು ಕಚೇರಿ ದೂರವಾಣಿ ಸಂಖ್ಯೆ: 0824-2451264 ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯುವ ಸಂಘಗಳಿಗೆ ಕ್ರೀಡಾ ಕಿಟ್- ಅರ್ಜಿ ಆಹ್ವಾನ














