ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಜುಲೈ 1ರಿಂದ ರೈಲು ಟಿಕೆಟ್ ದರ ಹೆಚ್ಚಳ..! – News Kadaba

ಜುಲೈ 1ರಿಂದ ರೈಲು ಟಿಕೆಟ್ ದರ ಹೆಚ್ಚಳ..!

(ನ್ಯೂಸ್ ಕಡಬ) newskadaba.com ಜೂ. 26. ಮೇಲ್‌, ಎಕ್ಸ್‌ ಪ್ರೆಸ್‌ ರೈಲುಗಳ ಎ.ಸಿ, ನಾನ್‌ ಎ.ಸಿ ಹಾಗೂ ಎರಡನೇ ದರ್ಜೆ ಪ್ರಯಾಣದ ಟಿಕೆಟ್‌ ದರಗಳನ್ನು ಜುಲೈ 1ರಿಂದ ತುಸು ಹೆಚ್ಚಳ ಮಾಡಲು ರೈಲ್ವೆ ಇಲಾಖೆ ಮುಂದಾಗಿದೆ.

 

ಮೇಲ್‌ ಮತ್ತು ಎಕ್ಸ್‌ ಪ್ರೆಸ್‌ ರೈಲುಗಳ ನಾನ್‌ ಎ.ಸಿ ಪ್ರಯಾಣ ದರದಲ್ಲಿ ಪ್ರತಿ ಕಿ.ಮೀ.ಗೆ ಕನಿಷ್ಠ 1 ಪೈಸೆ ಹೆಚ್ಚಳ, ಎ.ಸಿ ದರ್ಜೆ ಪ್ರಯಾಣಕ್ಕೆ ಪ್ರತಿ ಕಿ.ಮೀ.ಗೆ 2 ಪೈಸೆ ಹೆಚ್ಚಿಸುವ ಪ್ರಸ್ತಾವ ಇದೆ ಎಂದು ಮೂಲಗಳು ತಿಳಿಸಿವೆ.

 

ಉಪನಗರ ರೈಲು ಮತ್ತು ಮಾಸಿಕ ಟಿಕೆಟ್‌ ದರಗಳಲ್ಲಿ ಯಾವುದೇ ಹೆಚ್ಚಳ ಇಲ್ಲ. ಎರಡನೇ ದರ್ಜೆ ಸಾಮಾನ್ಯ ಟಿಕೆಟ್‌ಗೆ ಸಂಬಂಧಿಸಿ 500 ಕಿ.ಮೀ. ವರೆಗಿನ ಪ್ರಯಾಣ ದರದಲ್ಲಿ ಯಾವುದೇ ಹೆಚ್ಚಳ ಇರುವುದಿಲ್ಲ. 500 ಕಿ.ಮೀ. ನಂತರ ಪ್ರತಿ ಕಿ.ಮೀ.ಗೆ ಅರ್ಧಪೈಸೆಯಷ್ಟು ಹೆಚ್ಚಳ ಮಾಡುವ ಪ್ರಸ್ತಾವ ಇದೆ ಎಂದೂ ತಿಳಿಸಿದ್ದಾರೆ. ಪ್ರಯಾಣಿಕರಿಗೆ ಯಾವುದೇ ಹೊರೆಯಾಗದಂತೆ, ಕಾರ್ಯಾಚರಣೆ ವೆಚ್ಚ ಸರಿದೂಗಿಸುವ ಉದ್ದೇಶದಿಂದ ಟಿಕೆಟ್‌ ದರಗಳನ್ನು ಪರಿಷ್ಕರಿಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Scroll to Top