(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ. 26. ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಮಣ್ಣಗುಂಡಿಯಲ್ಲಿ ಗುರುವಾರದಂದು ಬೆಳಗ್ಗೆ ಮತ್ತೆ ಗುಡ್ಡ ಕುಸಿತಗೊಂಡು ಮಣ್ಣು ರಸ್ತೆಗೆ ಬಿದ್ದ ಪರಿಣಾಮ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.
ಇದೀಗ ಮಣ್ಣು ತೆರವುಗೊಳಿಸಿದ ಬಳಿಕ ಹೆದ್ದಾರಿಯಲ್ಲಿ ವಾಹನ ಸಂಚಾರ ಮತ್ತೆ ಪುನರಾರಂಭಗೊಂಡಿದೆ.
ಇದೇ ಸ್ಥಳದಲ್ಲಿ ಎರಡು ದಿನಗಳ ಹಿಂದೆ ಕೂಡ ಗುಡ್ಡ ಜರಿದು ರಸ್ತೆಗೆ ಮಣ್ಣು ಬಿದ್ದಿತ್ತು. ಇದೀಗ ಜೂ.26ರಂದು ಬೆಳಿಗ್ಗೆ ಮತ್ತೆ ಮಣ್ಣು ಕುಸಿತಗೊಂಡು ಸುಮಾರು 2 ಗಂಟೆ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.









