(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26.
2025-26 ನೇ ಸಾಲಿನ ಬೈಕಂಪಾಡಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)ದಲ್ಲಿ ಡಿಪ್ಲೋಮಾ ಕೋರ್ಸ್ ಗಳ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
100% ಉದ್ಯೋಗ ಆಧಾರಿತ ಡಿಪ್ಲೋಮಾ ಕೋರ್ಸು ಗಳಾದ ಡಿಪ್ಲೋಮಾ ಇನ್ ಆರ್ಟಿಫಿಶಿಯಲ್ ಇಂಟಲಿಜನ್ಸ್ ಆಂಡ್ ಮೆಷಿನ್ ಲರ್ನಿಂಗ್ ಮತ್ತು ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ವಿಭಾಗದಲ್ಲಿ ಹಾಗೂ ಡಿಪ್ಲೋಮಾ ಇನ್ ಪ್ರಿಶಿಷನ್ ಮ್ಯಾನುಫ್ಯಾಕ್ಚರಿಂಗ್ ವಿಭಾಗದಲ್ಲಿ ಬಾಕಿ ಉಳಿದಿರುವ ಸೀಟುಗಳಿಗೆ ಪ್ರವೇಶ ಅವಕಾಶವನ್ನು ಕಲ್ಪಿಸಲಾಗಿರುತ್ತದೆ.
ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಈ ಒಂದು ಅವಕಾಶವನ್ನು ಸದುಪಯೊಗ ಪಡಿಸಿಕೊಳ್ಳಬಹುದು. ಪಿ.ಯು.ಸಿ(ವಿಜ್ಞಾನ) ಹಾಗೂ ಐ.ಟಿ.ಐ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ನೇರವಾಗಿ ದ್ವಿತೀಯ ವರ್ಷದ ಡಿಪ್ಲೋಮಾ ಕೋರ್ಸ್ ಗಳ ಪ್ರವೇಶಾತಿಗೆ ಅರ್ಹರಾಗಿರುತ್ತಾರೆ. ಎಲ್ಲಾ ಕೋರ್ಸ್ ಗಳನ್ನು ಅಧ್ಯಯನ ಮಾಡುವಾಗ 3 ವರ್ಷದ ಡಿಪ್ಲೋಮಾ ತರಬೇತಿ ನಂತರ ಕಡ್ಡಾಯ ಒಂದು ವರ್ಷದ ಇಂಟರ್ನ್ ಶಿಪ್ ತರಬೇತಿ ನೀಡಲಾಗುತ್ತದೆ. ಈ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಮಾಸಿಕ 18,000 ರಿಂದ 20,000 ರೂಪಾಯಿವರೆಗೆ ಶಿಷ್ಯವೇತನ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗೆ ನಗರದ ಬೈಕಂಪಾಡಿ, ಕೈಗಾರಿಕಾ ವಲಯದ ಪ್ಲಾಟ್ ನಂ. 7ಇ, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ದೂ.ಸಂ:8073208137, 7899070548, 0824-2408003) ಸಂಪರ್ಕಿಸಬಹುದು ಎಂದು ಜಿ.ಟಿ.ಸಿ.ಸಿ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








