ಜರ್ಮನಿಯಲ್ಲಿ ಶಸ್ತ್ರ ಚಿಕಿತ್ಸೆಗೊಳಗಾದ ಸೂರ್ಯಕುಮಾರ್ ಯಾದವ್..!



(ನ್ಯೂಸ್ ಕಡಬ) newskadaba.com ಜೂ. 26. ಭಾರತ ಕ್ರಿಕೆಟ್ ತಂಡದ ಟಿ-20 ನಾಯಕ ಸೂರ್ಯಕುಮಾರ್ ಯಾದವ್ ವಿರಾಮದಲ್ಲಿದ್ದಾರೆ. ಇತ್ತೀಚೆಗಷ್ಟೆ ಸೂರ್ಯಕುಮಾರ್ ಯಾದವ್ ಜರ್ಮನಿಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಇದೀಗ ಹರ್ನಿಯಾಗೆ ಯಶಸ್ವಿ ಶಸ್ತ್ರಚಿಕಿತ್ಸೆ ಆಗಿದೆ ಎಂಬ ಮಾಹಿತಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.





 

ಶಸ್ತ್ರಚಿಕಿತ್ಸೆಯಿಂದಾಗಿ ಅವರು ಮುಂಬರುವ ಬಾಂಗ್ಲಾದೇಶ ಪ್ರವಾಸಕ್ಕೆ ಹೋಗುವ ಸಾಧ್ಯತೆ ಕಡಿಮೆಯಿದ್ದು, ಸಂಪೂರ್ಣ ಗುಣಮುಖವಾಗಲು ಅವರಿಗೆ 6 ರಿಂದ 12 ವಾರಗಳು ಬೇಕಾಗುತ್ತದೆ. ಮುಂದಿನ ವರ್ಷ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ 2026 ರಲ್ಲಿ ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸಲಿದ್ದು, ಇವರು ಮಹತ್ವದ ಪಾತ್ರ ವಹಿಸಲಿದ್ದಾರೆ.






 

ಇತ್ತೀಚೆಗೆ ಇಂಡಿಯನ್ ಪ್ರೀಮಿಯರ್ ಲೀಗ್ 2025 ರಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಇವರಿಗೆ ರೋಹಿತ್ ಶರ್ಮಾ ನಂತರ, ಬಿಸಿಸಿಐ ಟಿ20 ತಂಡದ ನಾಯಕತ್ವ ನೀಡಿದೆ.

error: Content is protected !!
Scroll to Top