ಕಾರು, ಬಸ್ ನಡುವೆ ಅಪಘಾತ – ವಾಹನಗಳು ಜಖಂ

(ನ್ಯೂಸ್ ಕಡಬ) newskadaba.com ಜೂ. 27. ಕಾರು ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಸಂಪಾಜೆ ಸಮೀಪದ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ದೇವರಕೊಲ್ಲಿ ಸಮೀಪ ಗುರುವಾರ ರಾತ್ರಿ ನಡೆದಿದೆ.

ಸುಳ್ಯ ಕಡೆಯಿಂದ ಮೈಸೂರು ಕಡೆ ತೆರಳುತ್ತಿದ್ದ ಕಾರು ಮತ್ತು ಮೈಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಡುವೆ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಅಪಘಾತದಲ್ಲಿ ಕಾರು ಹಾಗೂ ಬಸ್ ಎರಡೂ ವಾಹನಗಳು ಜಖಂಗೊಂಡಿದೆ.

Scroll to Top