ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮದುವೆಯಾಗುವುದಾಗಿ ನಂಬಿಸಿ ಮೋಸ ಗಂಡು ಮಗುವಿಗೆ ಜನ್ಮವಿತ್ತ ವಿದ್ಯಾರ್ಥಿನಿ..! – News Kadaba

ಮದುವೆಯಾಗುವುದಾಗಿ ನಂಬಿಸಿ ಮೋಸ ಗಂಡು ಮಗುವಿಗೆ ಜನ್ಮವಿತ್ತ ವಿದ್ಯಾರ್ಥಿನಿ..!

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 28. ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಗರ್ಭವತಿಯನ್ನಾಗಿಸಿದ ಪ್ರಕರಣದ ಸಂತ್ರಸ್ತೆ ಶುಕ್ರವಾರದಂದು ರಾತ್ರಿ ಗಂಡು ಮಗುವಿಗೆ ಜನ್ಮ ನೀಡಿರುವ ಕುರಿತು ವರದಿಯಾಗಿದೆ.

ವರದಿಯ ಪ್ರಕಾರ, ಪುತ್ತೂರು ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ ಜೆ.ರಾವ್ ಎಂಬಾತ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆಸಿಕೊಂಡು ಬಲವಂತದ ದೈಹಿಕ ಸಂಪರ್ಕ ಬೆಳೆಸಿ ಇದೀಗ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವುದಾಗಿ ಸಂತ್ರಸ್ತೆ ನೀಡಿದ್ದ ದೂರಿನ ಮೇರೆಗೆ ಜೂ.25ರಂದು ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ನಡುವೆ ಯುವತಿ ಜೂ.27ರಂದು ರಾತ್ರಿ ಪುತ್ತೂರಿನ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎನ್ನಲಾಗಿದೆ.

ಯುವತಿಗೆ ವಂಚನೆ ಪ್ರಕರಣ ದಾಖಲಾದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

Scroll to Top