ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಐಪಿಎಸ್ ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ಜೂ. 28.  ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಬಳಿಕ ರಾಜೀನಾಮೆ ನೀಡಿದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರಿಗೆ ಬಿಜೆಪಿಯ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ.

 

ಅಣ್ಣಾಮಲೈ ಅವರಿಗೆ ಹೈಕಮಾಂಡ್ ಮಟ್ಟದಲ್ಲಿ ಹುದ್ದೆ ಸಿಗಲಿದೆ ಎಂದು ಅಮಿತ್ ಶಾ ಹೇಳಿದ ಕೆಲವೇ ಗಂಟೆಗಳಲ್ಲಿ ಅಣ್ಣಾಮಲೈ ಅವರನ್ನು ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ.

ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಕೆ.ಅಣ್ಣಾಮಲೈ ಬಳಿಕ ಹುದ್ದೆಗೆ ರಾಜೀನಾಮೆ ನೀಡಿ ರಾಜಕೀಯ ಪ್ರವೇಶಿಸಿ, ರಾಷ್ಟ್ರೀಯತೆಯ ವಿಚಾರದಲ್ಲಿ ರಾಜಕೀಯ ಜೀವನ ಆರಂಭಿಸಿದ ಅವರು ತಮಿಳುನಾಡು ಬಿಜೆಪಿಯಲ್ಲಿ ಹೊಸ ಕ್ರಾಂತಿಯನ್ನು ಮಾಡಿದರು.

 

ಎಐಡಿಎಂಕೆ ಜೊತೆಗಿನ ಮೈತ್ರಿಯ ಕಾರಣಕ್ಕೆ ಅಣ್ಣಾಮಲೈ ಅವರನ್ನು ರಾಜ್ಯಾಧ್ಯಕ್ಷ ಹುದ್ದೆಯಿಂದ ಕೆಳಗಿಳಿಸಲಾಗಿತ್ತು. ಅದಾಗಲೇ ಅಣ್ಣಾಮಲೈ ಅವರಿಗೆ ರಾಷ್ಟ್ರೀಯ ಹುದ್ದೆ ನೀಡುವ ಎಲ್ಲಾ ಮುನ್ಸೂಚನೆಗಳನ್ನು ನೀಡಿದ್ದರು. ಸದ್ಯ ಇದೀಗ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡುವ ಮೂಲಕ ಜವಾಬ್ದಾರಿಯುತ ಸ್ಥಾನವನ್ನು ನೀಡಲಾಗಿದೆ.

Scroll to Top