(ನ್ಯೂಸ್ ಕಡಬ) newskadaba.com ಕಡಬ, ಜೂ. 30. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಕಡಬ ತಾಲೂಕು ನೆಲ್ಯಾಡಿ ವಲಯ ವ್ಶಾಪ್ತಿಯ ಕೊಣಾಜೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪುತ್ತಿಗೆ ಇಲ್ಲಿಗೆ ಶುದ್ಧ ಕುಡಿಯುವ ನೀರಿನ ಘಟಕದ ಹಸ್ತಾಂತರ ಕಾರ್ಯಕ್ರಮ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಡಬ ತಾಲೂಕು ಯೋಜನಾಧಿಕಾರಿ ಶ್ರೀ ಪ್ರಕಾಶ್ ಕುಮಾರ್ ರವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾದಿಕಾರಿಯವರು ಮಂಜೂರು ಮಾಡಿರುವ ಶುದ್ದ ಕುಡಿಯುವ ನೀರಿನ ಘಟಕವನ್ನು ಹಸ್ತಾಂತರಿಸಿ ಮಾತನಾಡಿ, ಧರ್ಮಸ್ಥಳ ಯೋಜನೆಯಿಂದ ಪೂಜ್ಯರು ಪ್ರಸಾದ ರೂಪದಲ್ಲಿ ಮಕ್ಕಳಿಗೆ ಅನುಕೂಲವಾಗುವಂತೆ ಶುದ್ಧ ಕುಡಿಯುವ ನೀರಿನ ಘಟಕವನ್ನು ನೀಡಿರುತ್ತಾರೆ. ವಿದ್ಯಾರ್ಥಿಗಳು ಶುದ್ಧ ಕುಡಿಯುವ ನೀರನ್ನು ಬಳಸಿ ಆರೋಗ್ಶವಂತರಾಗಿ ವಿದ್ಯಾರ್ಜನೆ ಮಾಡಬೇಕು. ಸರಕಾರಿ ಶಾಲೆಗಳು ಮೂಲ ಸೌಕರ್ಯದ ಕೊರತೆಯಿಂದ ಮುಚ್ಚುವ ಪರಿಸ್ಥಿತಿಯಲ್ಲಿದ್ದು ಸ್ಥಳೀಯರು ಹೆಚ್ಚಿನ ಕಾಳಜಿ ವಹಿಸಿ ಉಳಿಸಿಕೊಳ್ಳುವ ಪಣತೊಡಬೇಕು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯಿಂದ ವಿದ್ಯಾರ್ಥಿಗಳ ವಿದ್ಶಾರ್ಜನೆಗೆ ಪೂರಕವಾಗಿ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದ್ದು ಅವುಗಳ ಪ್ರಯೋಜನ ಪಡೆದುಕೊಳ್ಳುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಊರಿನ ಪ್ರಮುಖರಾದ ಶ್ರೀ ಸೂರಪ್ಪ ಗೌಡ ಕಣಿಯ, ಶ್ರೀ ಪ್ರಕಾಶ್ ಬಾಕಿಲ, CRP ನೆಲ್ಯಾಡಿ ಕ್ಲಸ್ಟರ್ ಶ್ರೀ ಲೋಕಯ್ಯ ಗೌಡ ನೆಕ್ಕಾಜೆ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪುತ್ತಿಗೆ ಒಕ್ಕೂಟದ ಅಧ್ಶಕ್ಷ ಶ್ರೀ ಕೇಶವ ಗೌಡ ಪರಾರಿ, ಪೂರ್ವ ವಿದ್ಯಾರ್ಥಿ ಸಂಘದ ಅಧ್ಶಕ್ಷರು ಶ್ರೀ ಸುದೇಶ್ ಜೈನ್, ಶಾಲಾಭಿವೃಧ್ಧಿ ಸಮಿತಿ ಸದಸ್ಯರುಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಗುರುಗಳಾದ ಶ್ರೀ ಮಧುಸೂದನ ಕೆ ಎ. ಕಾರ್ಯಕ್ರಮವನ್ನು ನಿರೂಪಿಸಿ, ಶಿಕ್ಷಕರಾದ ಶ್ರೀಮತಿ ಜಯಶ್ರೀ ಸ್ವಾಗತಿಸಿ, ಶ್ರೀಮತಿ ನಯನಕುಮಾರಿ ವಂದಿಸಿದರು.









