ಮಂಗಳೂರು ಸೇರಿದಂತೆ ರಾಜ್ಯದ 4 ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ



(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 30. ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ರಾಜ್ಯದ 4 ವಿಮಾನ ನಿಲ್ದಾಣಗಳ ನಿರ್ದೇಶಕರಿಗೆ ಬಾಂಬ್ ಸ್ಫೋಟಿಸುವ ಕುರಿತು ರವಿವಾರ ಬೆಳಗ್ಗೆ ಇಮೇಲ್ ಮೂಲಕ ಬೆದರಿಕೆಯ ಸಂದೇಶ ಬಂದಿರುವುದಾಗಿ ವರದಿಯಾಗಿದೆ.





 

ಮಂಗಳೂರು, ಹುಬ್ಬಳ್ಳಿ, ಬೆಳಗಾವಿ ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳಿಗೆ ಇಮೇಲ್ ಮೂಲಕ ಬೆದರಿಕೆಯ ಸಂದೇಶ ಬಂದಿದೆ. ಮುಂಜಾಗ್ರತಾ ಕ್ರಮವಾಗಿ ನಿಲ್ದಾಣಗಳಲ್ಲಿ ಬಿಗಿ ಭದ್ರತೆ ಹೆಚ್ಚಿಸಲಾಗಿದ್ದು, ಬಜ್ಪೆಯ ಮಂಗಳೂರು ಅಂತರ್‌ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಮೇಲ್ ಮೂಲಕ ಬೆದರಿಕೆ ಬಂದಿದ್ದರಿಂದ ಈ ಬಗ್ಗೆ ಪೊಲೀಸರು ಭದ್ರತೆಯ ಬಗ್ಗೆ ನಿಗಾವಹಿಸಿದ್ದಾರೆ ಎಂದು ಬಜ್ಪೆ ಪೊಲೀಸರು ತಿಳಿಸಿದ್ದಾರೆ.






 

ವಿಮಾನ ನಿಲ್ದಾಣದ ಆವರಣ ಪ್ರವೇಶಿಸುವ ಪ್ರತಿಯೊಬ್ಬ ಪ್ರಯಾಣಿಕರನ್ನು ಮತ್ತು ಸಾರ್ವಜನಿಕರನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಬಾಂಬ್ ನಿಷ್ಕ್ರೀಯ ದಳ, ಶ್ವಾನ ದಳ, ಪೊಲೀಸ್, ಆಂತರಿಕ ಭದ್ರತಾ ಸಿಬ್ಬಂದಿ ಮತ್ತು ಗುಪ್ತಚರ ಇಲಾಖೆ ನಿಗಾ ವಹಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

error: Content is protected !!
Scroll to Top