ಪುತ್ತೂರು ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಆಶಾಜ್ಯೋತಿ ಪುತ್ತೂರಾಯ ವರ್ಗಾವಣೆ



(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 30. ವಿವಿಧ ಸಂಘ ಸಂಸ್ಥೆಗಳ ಮೂಲಕ ಸರಕಾರಿ ಆಸ್ಪತ್ರೆಗೆ ಹಲವು ಸೌಲಭ್ಯಗಳನ್ನು ನೀಡುವ ಮೂಲಕ ಜನಪ್ರಿಯತೆ ಗಳಿಸಿದ್ದ ಪುತ್ತೂರು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಆಶಾಜ್ಯೋತಿ ಪುತ್ತೂರಾಯ ಅವರು ಮಡಿಕೇರಿ ಜಿಲ್ಲಾಸ್ಪತ್ರೆಗೆ  ವರ್ಗಾವಣೆಗೊಳ್ಳಲಿದ್ದಾರೆ.







ಇದರ ಜೊತೆಗೆ ಅರಿವಳಿಕೆ ತಜ್ಞೆ ಡಾ.ಜಯಕುಮಾರಿ ಅವರು ತುಮಕೂರು ಜಿಲ್ಲಾಸ್ಪತ್ರೆಗೆ, ದಂತ ತಜ್ಞ ಡಾ.ಜೈದೀಪ್ ಅವರು ಸಕಲೇಶಪುರ ತಾಲೂಕು ಆಸ್ಪತ್ರೆಗೆ ಹಾಗೂ ಅರಿವಳಿಕೆ ತಜ್ಞೆ ಡಾ.ಶ್ವೇತಾ ಸುಳ್ಯ ಸರಕಾರಿ ಆಸ್ಪತ್ರೆಗೆ ವರ್ಗಾವಣೆಗೊಳ್ಳಲಿದ್ದಾರೆ.






ಇತ್ತೀಚೆಗಷ್ಟೇ ವೈದ್ಯರುಗಳ ಕುರಿತು ಕೌನ್ಸಿಲ್ ನಡೆದಿದ್ದು, ಅದರಲ್ಲಿ ವೈದ್ಯರ ಆಯ್ಕೆಗೆ ಸಂಬಂಧಿಸಿ ವರ್ಗಾವಣೆಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಅಧಿಕೃತ ಆದೇಶ ಇನ್ನಷ್ಟೇ ಬರಬೇಕಿದೆ.

error: Content is protected !!
Scroll to Top