ಜುಲೈ 1ರಿಂದ ರೈಲು ಹೊರಡುವ 8 ಗಂಟೆ ಮೊದಲು ರಿಸರ್ವೇಷನ್ ಚಾರ್ಟ್ ಬಿಡುಗಡೆ



(ನ್ಯೂಸ್ ಕಡಬ) newskadaba.com ಜೂ. 30. ಜುಲೈ 1ರಿಂದ ರೈಲು ಹೊರಡುವ 8 ಗಂಟೆಯ ಮೊದಲು ರಿಸರ್ವೇಷನ್‌ ಚಾರ್ಟ್ ಬಿಡುಗಡೆ ಮಾಡಲಾಗುತ್ತದೆ ಎಂದು ಭಾರತೀಯ ರೈಲ್ವೇ ಇಲಾಖೆ ತಿಳಿಸಿದೆ.







 

ಸದ್ಯ 4 ಗಂಟೆಯ ಮೊದಲೇ ರಿಸರ್ವೇಷನ್ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತಿದ್ದು ಆದರೆ ಜುಲೈ 1 ರಿಂದ ಐಆರ್‌ಸಿಟಿಸಿ ವೆಬ್‌ ಸೈಟ್‌ ಮತ್ತು ಮೊಬೈಲ್ ಅಪ್ಲಿಕೇಶನ್ ಮೂಲಕ ಪರಿಶೀಲಿಸಿದ ಬಳಕೆದಾರರಿಗೆ ಮಾತ್ರ ತತ್ಕಾಲ್ ಟಿಕೆಟ್‌ಗಳನ್ನು ಬುಕ್ ಮಾಡಲು ಅನುಮತಿ ನೀಡಲಾಗುವುದು ಎಂದು ಭಾರತೀಯ ರೈಲ್ವೆ ಹೇಳಿದೆ.






 

ತತ್ಕಾಲ್ ಬುಕ್ಕಿಂಗ್‌ ಗಳಿಗಾಗಿ ಒಟಿಪಿ ಆಧಾರಿತ ದೃಢೀಕರಣದ ಅನುಷ್ಠಾನವು ಜುಲೈ ಕೊನೆಯಿಂದ ಆರಂಭವಾಗಲಿದೆ. ಬಳಕೆದಾರರು ಆಧಾರ್ ಅಥವಾ ತಮ್ಮ ಡಿಜಿಲಾಕರ್ ಖಾತೆಗಳಲ್ಲಿ ಸಂಗ್ರಹವಾಗಿರುವ ಇತರ ಸರ್ಕಾರಿ ಗುರುತಿನ ದಾಖಲೆಗಳನ್ನು ಬಳಸಿಕೊಂಡು ತಮ್ಮ ಗುರುತನ್ನು ಪರಿಶೀಲಿಸಬೇಕಾಗುತ್ತದೆ. ಒಂದು ವೇಳೆ ವೇಟಿಂಗ್ ಲಿಸ್ಟ್‌ ನಲ್ಲಿದ್ದ ಪ್ರಯಾಣಿಕರಿಗೆ ಟಿಕೆಟ್ ಸಿಗದೇ ಇದ್ದರೆ ಪರ್ಯಾಯ ಪ್ರಯಾಣ ವ್ಯವಸ್ಥೆಗಳನ್ನು ಮಾಡಲು ಸಮಯ ಸಿಗಲಿದೆ.

error: Content is protected !!
Scroll to Top