(ನ್ಯೂಸ್ ಕಡಬ) newskadaba.com ಜು. 01. ಎದೆನೋವಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋದ ವ್ಯಕ್ತಿ ಅಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಕಲ್ಲಾಜೆಯಲ್ಲಿ ಸೋಮವಾರದಂದು ರಾತ್ರಿ ನಡೆದಿದೆ.
ಮೃತಪಟ್ಟವರನ್ನು ಕಲ್ಲಾಜೆ ಗಂಪದಕೋಡಿ ನಿವಾಸಿ ವಜ್ರಾಕ್ಷ ಪೂಜಾರಿ(53) ಎಂದು ಗುರುತಿಸಲಾಗಿದೆ.
ಆರೋಗ್ಯವಂತರಾಗಿದ್ದ ವಜ್ರಾಕ್ಷ ಪೂಜಾರಿ ಎಂದಿನಂತೆ ಸೋಮವಾರವೂ ಟ್ಯಾಪಿಂಗ್ ಕೆಲಸಕ್ಕೆ ಹೋಗಿ ಸಂಜೆ ಮನೆಗೆ ಬಂದಿದ್ದರು. ರಾತ್ರಿ ವೇಳೆ ಎದೆನೋವು ಕಾಣಿಸಿದ ಹಿನ್ನೆಲೆ ತನ್ನ ಸ್ಕೂಟರ್ ನಲ್ಲಿ ಉಜಿರೆಯ ಖಾಸಗಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಮುಂದಾಗಿದ್ದಾರೆ. ಈ ವೇಳೆ ಕುಸಿದು ಬಿದ್ದಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.








