ಸಿಎಂ ಬದಲಾವಣೆ ಕುರಿತು ಹೇಳಿಕೆ- ಇಕ್ಬಾಲ್ ಹುಸೇನ್‍ ಗೆ ಶೋಕಾಸ್ ನೋಟಿಸ್



(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 02. ಡಿಸಿಎಂ ಡಿಕೆ ಶಿವಕುಮಾರ್ ಪರವಾಗಿ 100 ಶಾಸಕರು ಸಿಎಂ ಬದಲಾವಣೆ ಬಯಸಿದ್ದಾರೆ ಎಂದು ಹೇಳಿದ್ದ ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಮಂಗಳವಾರದಂದು ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.







ಮುಖ್ಯಮಂತ್ರಿ ಬದಲಾವಣೆ ಕುರಿತು ಹೇಳಿಕೆ ನೀಡಿದ ಇಕ್ಬಾಲ್ ಹುಸೇನ್‍ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಾರಣ ಕೇಳಿ ನೋಟಿಸ್ ನೀಡಿದ್ದು, ಒಂದು ವಾರದ ಒಳಗಾಗಿ ತಮ್ಮ ಹೇಳಿಕೆಗಳ ಬಗ್ಗೆ ಸಮಜಾಯಿಷಿ ನೀಡುವಂತೆ ಸೂಚಿಸಿದ್ದಾರೆ.






ಇಂದು ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ಪಕ್ಷದಲ್ಲಿ ಗೊಂದಲ ಹಾಗೂ ಮುಜುಗರ ಉಂಟು ಮಾಡುವಂತಹ ಹೇಳಿಕೆಗಳನ್ನು ಮಾಧ್ಯಮಗಳಿಗೆ ನೀಡಿದ್ದೀರಿ. ತಮ್ಮ ಈ ಬಹಿರಂಗ ಹೇಳಿಕೆಗಳು ಪಕ್ಷಕ್ಕೆ ಮುಜುಗರ ಉಂಟು ಮಾಡುವುದಲ್ಲದೇ, ಪಕ್ಷದ ಶಿಸ್ತು ಉಲ್ಲಂಘನೆ ಆಗಿರುತ್ತದೆ. ತಮ್ಮ ಈ ಅಶಿಸ್ತಿನ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಿ, ಈ ಕಾರಣ ಕೇಳಿ ನೋಟಿಸ್ ನೀಡಲಾಗಿದೆ ಎಂದು ಡಿಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.

error: Content is protected !!
Scroll to Top